, ,

ಸಂಜೀವಿನಿ ಒಕ್ಕೂಟದ ಮತ್ತೊಂದು ಆಕ್ರಮ: ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗ

ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ. ಒಕ್ಕೂಟದಲ್ಲಿ ಮುಖ್ಯ ಪುಸ್ತಕ ಬರಹಗಾರರಾಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ಈ ಆರೋಪ ಮಾಡಲಾಗಿದೆ. 2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಹಣವನ್ನು ಒಕ್ಕೂಟಕ್ಕೆ ಮರುಪಾವತಿಸಿದ್ದರೂ, ಆ ಮೊತ್ತವನ್ನು ಖಾತೆಗೆ ಜಮಾ ಮಾಡದೆ ಎರಡು ಖಾತೆ…

ಹೆಬ್ರಿ: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ಸದಸ್ಯರಿಂದ ಮರುಪಾವತಿಯಾದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆ ಸೃಷ್ಟಿಸಿ ಸುಮಾರು ₹28.19 ಲಕ್ಷ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿದೆ.

ಒಕ್ಕೂಟದಲ್ಲಿ ಮುಖ್ಯ ಪುಸ್ತಕ ಬರಹಗಾರರಾಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ಈ ಆರೋಪ ಮಾಡಲಾಗಿದೆ.

2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಹಣವನ್ನು ಒಕ್ಕೂಟಕ್ಕೆ ಮರುಪಾವತಿಸಿದ್ದರೂ, ಆ ಮೊತ್ತವನ್ನು ಖಾತೆಗೆ ಜಮಾ ಮಾಡದೆ ಎರಡು ಖಾತೆ ಪುಸ್ತಕಗಳು ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರ ನಕಲಿ ಸಹಿಗಳನ್ನು ಬಳಸಿ ಒಟ್ಟು ₹28,19,489 ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಮೂಲಕ ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026 ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed