,

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ? ಸಿಬಿಐಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿರುವುದರಿಂದ ಈ ಪ್ರಕರಣ ಮರಳಿ ತನಿಖೆಯಾಗುವ ನಿರೀಕ್ಷೆ ಮೂಡಿದೆ. 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯ ಅವರ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿರುವುದರಿಂದ ಈ ಪ್ರಕರಣ ಮರಳಿ ತನಿಖೆಯಾಗುವ ನಿರೀಕ್ಷೆ ಮೂಡಿದೆ.

2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯ ಅವರ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆ ನಡೆದಿತ್ತು. ಕಾರ್ಕಳದ ಸಂತೋಷ್ ರಾವ್‌ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದಡಿ ಬಂಧಿಸಲಾಗಿತ್ತು. ಕೆಲವು ಸಮಯಗಳ ಹಿಂದೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್‌ನನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಿಡುಗಡೆಗೊಳಿಸಿತ್ತು.

ಈ ವೇಳೆ ಸಿಬಿಐ ನ್ಯಾಯಾಲಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿತ್ತು. ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ಅವರ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಇದರ ಬಗ್ಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಪ್ರಮುಖ ವಿಚಾರಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಕುಸುಮಾವತಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟೀಸ್ ಜಾರಿಗೊಳಿಸಿದೆ.

ಕಳೆದ ಎರಡು ದಶಕಗಳಿಂದ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟ ನಾನಾ ತಿರುವುಗಳನ್ನು ಪಡೆದುಕೊಂಡು ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತನಿಖೆಗೆ ಮರು ಚಾಲನೆ ದೊರೆತಂದಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed