ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನಿಂದಲೇ ಈ ಒಂದು ಹೀನ ಕೃತ್ಯ ನಡೆದಿದ್ದು, ಆಗಸ್ಟ್ 4 ರಂದು ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಪರಿಚೋಕ್ ನಲ್ಲಿ ಬಾಲಕಿಗೆ ಸ್ಲೀಪರ್ ಬಸ್ ಸಿಕ್ಕಿತ್ತು ಬಸ್ ನಲ್ಲಿ ಮೊದಲು ಅಶ್ಲೀಲವಾಗಿ ಸನ್ನೆ ಮಾಡಿ ಬಳಿಕ ಅತ್ಯಾಚಾರ ಎಸಗಿದ್ದಾರೆ. ವಿರೋಧಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಅತ್ಯಾಚಾರ ಎಸಗಿದ ಬಳಿಕ ಕಾಶ್ಮೀರಿ ಗೇಟ್ ಐ ಎಸ್ ಬಿ ಟಿ ಬಳಿ ಬಾಲಕಿಯನ್ನು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ. ಬಾಲಕಿಯ ದೂರು ಆಧರಿಸಿ ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸ್ಲೀಪರ್ ಬಸ್ ಚಾಲಕ ಕುಲದೀಪ್ ಹಾಗೂ ಕಂಡಕ್ಟರ್ ಸಂದೀಪ್ ನನ್ನ ಅರೆಸ್ಟ್ ಮಾಡಿದ್ದಾರೆ.















