ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಪರ್ವ ಮುಗಿಯುತ್ತಿದ್ದಂತೆ, ಇದೀಗ ಎಲ್ಲರ ಕಣ್ಣು ನೂತನ ಸಚಿವ ಸಂಪುಟದ ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಕುರ್ಚಿ ಏರಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಯಾವ ರೀತಿಯ ಟೀಮ್ ನೀಡಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಭಾರಿ ಸರ್ಜರಿಗೇ ಕೈಹಾಕಿದೆ.
ವಿಶೇಷವಾಗಿ, ಹೊಸ ಸಂಪುಟದಲ್ಲಿ ಯುವಕರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹಳೆಯ ಮುಖಗಳಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಪೂರ್ಣ ‘ಯುವ ಪಡೆ’ಯನ್ನು ಕಣಕ್ಕಿಳಿಸಲು ದೆಹಲಿ ಮಟ್ಟದಲ್ಲಿ ಪ್ಲಾನ್ ಸಿದ್ಧವಾಗಿದೆ.
ಲಭ್ಯವಿರುವ ಆಂತರಿಕ ಮೂಲಗಳ ಪ್ರಕಾರ, ಹೊಸ ಸರ್ಕಾರದಲ್ಲಿ ಇಬ್ಬರು ಉಪಮುಖ್ಯಮಂತ್ರಿ (DCM) ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ. ಅದರಲ್ಲಿ ಮೊದಲ ಹೆಸರು ಸ್ಪೀಕರ್ ಯು.ಟಿ ಖಾದರ್ ಮುಂಚೂಣಿಯಲ್ಲಿದ್ದಾರೆ.
ದ.ಕ ಜಿಲ್ಲಾ ಜನತೆಯ ಆಶ್ರಯದಂತೆ ಯು.ಟಿ ಖಾದರ್ ಉಪಮುಖ್ಯಮಂತ್ರಿಯಾದರೆ ಜಿಲ್ಲೆ, ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ.
