,

ಮಸಾಲೆಗಳಲ್ಲಿ ಕ್ಯಾನ್ಸರ್‌ಕಾರಕ ಇಟಿಒ ಬಳಕೆ ನಿಷೇಧಕ್ಕೆ ರಾಜ್ಯದ ಆಗ್ರಹ; ಕೇಂದ್ರದಿಂದ ತಜ್ಞರ ಸಮಿತಿ ರಚನೆ

ನವದೆಹಲಿ: ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾರುಕಟ್ಟೆಗಳ ಮೇಲೆ ಕರ್ನಾಟಕದ ಆರೋಗ್ಯ ಇಲಾಖೆ ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿದೆ. ಈ ವೇಳೆ ಪ್ಯಾಕ್ ಮಾಡಲಾದ ಹಲವು ಮಸಾಲೆ ಪದಾರ್ಥಗಳಲ್ಲಿ ಇಟಿಒ ಪತ್ತೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮಾರುಕಟ್ಟೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಹಾರ…

ನವದೆಹಲಿ: ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾರುಕಟ್ಟೆಗಳ ಮೇಲೆ ಕರ್ನಾಟಕದ ಆರೋಗ್ಯ ಇಲಾಖೆ ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿದೆ. ಈ ವೇಳೆ ಪ್ಯಾಕ್ ಮಾಡಲಾದ ಹಲವು ಮಸಾಲೆ ಪದಾರ್ಥಗಳಲ್ಲಿ ಇಟಿಒ ಪತ್ತೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ.

ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮಾರುಕಟ್ಟೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿವೆ. ಈ ವೇಳೆ ಭಾರಿ ಪ್ರಮಾಣದ ಕಳಪೆ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಈ ವೇಳೆ ಪ್ಯಾಕ್ ಮಾಡಲಾದ ಖಾರದ ಪುಡಿ, ಸಾಂಬಾರ್ ಪುಡಿ ಹಾಗೂ ಗರಂ ಮಸಾಲಾಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ರಾಸಾಯನಿಕ ಮತ್ತು ಕೃತಕ ಬಣ್ಣ ಬಳಸಿರುವುದು ಪತ್ತೆಯಾಗಿತ್ತು.ಇದರ ಬೆನ್ನಲ್ಲೇ ರಾಷ್ಟ್ರಮಟ್ಟದಲ್ಲೂ ಜನರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳು ಸಿಗಲಿ ಎಂಬ ಕಾರಣದಿಂದ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಡ ಹಾಕಿದೆ. ಇದೀಗ ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಇಟಿಒ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಅಥವಾ ಪರ್ಯಾಯ ಮಾರ್ಗಗಳನ್ನು ಹುಡುಕಲು ವೈಜ್ಞಾನಿಕ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.ಎಥಿಲಿನ್ ಆಕ್ಸೈಡ್ (ಇಟಿಒ) ಎಂಬುದು ಒಂದು ಬಗೆಯ ಬಣ್ಣರಹಿತ ಅನಿಲವಾಗಿದ್ದು, ಮಸಾಲೆ ಪದಾರ್ಥಗಳಲ್ಲಿ ಬ್ಯಾಕ್ಟೀರಿಯಾ ಅಥವಾ ಫಂಗಸ್ ಬಾರದಂತೆ ತಡೆಯಲು ಜಿಡ್ಡುನಾಶಕ ಅಥವಾ ಸ್ಟೆರಿಲೈಸೇಶನ್ ಏಜೆಂಟ್ ಆಗಿ ಬಳಕೆ ಮಾಡಲಾಗುತ್ತದೆ. ಅತ್ಯಂತ ಅಪಾಯಕಾರಿ ಕೆಮಿಕಲ್ ಆಗಿರುವ ಇದನ್ನು, ವಿಶ್ವ ಆರೋಗ್ಯ ಸಂಸ್ಥೆಯು ಕ್ಯಾನ್ಸರ್ ಕಾರಕ ಕೆಮಿಕಲ್ ಎಂದು ಹೇಳಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed