,

​ಮಂಗಳೂರು: ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್‌..!!

​ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.​​ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ ಡಿ.26ರ ರಾತ್ರಿ ಹೆಂಚು ತೆಗೆದು ಒಳ ಪ್ರವೇಶಿಸಿ…

​ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.​​ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ ಡಿ.26ರ ರಾತ್ರಿ ಹೆಂಚು ತೆಗೆದು ಒಳ ಪ್ರವೇಶಿಸಿ ಪೊಸಪ್ಪೆ ದೈವ, ಮಂತ್ರದೇವತೆ, ಕಲ್ಲುರ್ಟಿ ಪಂಜುರ್ಲಿ ದೈವಗಳ ಮೂರ್ತಿಗಳು, ಬೆಳ್ಳಿಯ ಕಡ್ಸಲೆ (ಖಡ್ಗ), ಘಂಟೆ ಹಾಗೂ ಎಲ್.ಇ.ಡಿ ಟಿವಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಹೊತ್ತೊಯ್ದಿದ್ದರು.

​ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಸಿಸಿಟಿವಿ ಹಾಗೂ ತಾಂತ್ರಿಕ ತನಿಖೆ ನಡೆಸಿದಾಗ ಸಿಕ್ಕಿಬಿದ್ದವನೇ ವಾಜೀದ್ ಜೆ @ ವಾಜಿ (27). ಈತ ಸಾಮಾನ್ಯ ಕಳ್ಳನಲ್ಲ, ಸುರತ್ಕಲ್ ಠಾಣೆಯ ‘ಬಿ’ ರೌಡಿ ಶೀಟರ್. ಮಂಗಳೂರು, ಉಡುಪಿ, ಹಾಸನ ಸೇರಿದಂತೆ ವಿವಿಧೆಡೆ ಕೊಲೆಯತ್ನ, ದರೋಡೆ, ದನ ಕಳ್ಳತನ ಸೇರಿದಂತೆ ಬರೋಬ್ಬರಿ 16ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಭೂಪ.

​ವಾಜೀದ್ ನೀಡಿದ ಮಾಹಿತಿಯ ಮೇರೆಗೆ ಕದ್ದ ತಾಮ್ರ ಹಾಗೂ ಹಿತ್ತಾಳೆ ಸಾಮಗ್ರಿಗಳನ್ನು ಖರೀದಿ ಮಾಡಿದ್ದ ಜೋಕಟ್ಟೆಯ ಸಯ್ಯದ್ ಆಲಿ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಒಟ್ಟು 1,95,000 ರೂ. ಮೌಲ್ಯದ ಬೆಳ್ಳಿಯ ಮಂತ್ರದೇವತೆ ಮೂರ್ತಿ, ಕೊಡೆ, ಕಡ್ಸಲೆ.​ಹಿತ್ತಾಳೆ ಹಾಗೂ ತಾಮ್ರದ ಪೂಜಾ ಪರಿಕರಗಳು, ಟಿವಿ, ಸೆಟ್ ಆಪ್ ಬಾಕ್ಸ್ ಹಾಗೂ ಕಳ್ಳತನದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.​ದೈವಗಳ ಸೊತ್ತನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ ಈ ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ದೈವದ ಶಾಪವೋ ಅಥವಾ ಪೊಲೀಸರ ಚಾಕಚಕ್ಯತೆಯೋ, ಒಟ್ಟಿನಲ್ಲಿ ಕಳ್ಳರು ಈಗ ಜೈಲು ಪಾಲಾಗಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed