, ,

1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಭ್ರಷ್ಟ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ.!

ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಲಬುರಗಿ ಅಫಜಲಪುರದ ಮಾಜಿ ತಹಶೀಲ್ದಾರ್‌ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಏನಿದು ಪ್ರಕರಣ?ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ…

ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಲಬುರಗಿ ಅಫಜಲಪುರದ ಮಾಜಿ ತಹಶೀಲ್ದಾರ್‌ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?
ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಇಲಾಖಾ ತನಿಖೆಯ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಶಿವಲಿಂಗಯ್ಯ ಅವರು ಅಂದಿನ ತಹಶೀಲ್ದಾರ್‌ ಶಶಿಕಲಾ ಅವರನ್ನು ಕೋರಿದ್ದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಪ್ರಕರಣ ಇತ್ಯರ್ಥಪಡಿಸಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಹಣ ನೀಡದಿದ್ದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಲೋಕಾಯುಕ್ತ ದಾಳಿ
ತಹಶೀಲ್ದಾರ್ ಬೇಡಿಕೆಯಿಂದ ಬೇಸತ್ತ ಶಿವಲಿಂಗಯ್ಯ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು. ತಹಶೀಲ್ದಾರ್ ಸೂಚನೆಯಂತೆ 2017ರ ಆಗಸ್ಟ್ 31ರಂದು ಶಿವಲಿಂಗಯ್ಯ ಅವರು ಶಿವಾನಂದ ಜಮಖಂಡಿ ಎಂಬುವವರಿಗೆ ಲಂಚದ ಹಣ ನೀಡುತ್ತಿದ್ದರು. ಆ ಹಣವನ್ನು ಪಡೆದು ತಹಶೀಲ್ದಾರ್‌ಗೆ ತಲುಪಿಸುವಾಗ ಲೋಕಾಯುಕ್ತ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು.

ನ್ಯಾಯಾಲಯದ ಕಠಿಣ ತೀರ್ಪು
ಅಂದಿನ ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಕೃಷ್ಣಪ್ಪ ಕಲ್ಲದೇವರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠೆ ಅವರು ಸರ್ಕಾರದ ಪರವಾಗಿ ಪ್ರಬಲ ವಾದ ಮಂಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ.ಎಲ್‌. ಲಕ್ಷ್ಮೀನಾರಾಯಣ ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed