ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಮಿತಿಮೀರುತ್ತಿದೆ . ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇನ್ನು ರಾಜ್ಯಾದ್ಯಂತ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಅನೇಕ ಭಾಗಗಗಳಲ್ಲಿ, ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಹೆಚ್ಚಾಗಿದೆ. ಹಾಗೇ, ಉಷ್ಣಾಂಶ ಹೆಚ್ಚಳವಾಗುತ್ತಿರುವುದರಿಂದ ಜನಸಾಮಾನ್ಯರು ಎಚ್ಚರಿಕೆಯಿಂದ ಇರಬೇಕು ಎಂದೂ IMD ಎಚ್ಚರಿಕೆ ನೀಡಿದೆ..
ಕಲಬುರ್ಗಿಯಲ್ಲಂತೂ ಗರಿಷ್ಠ ತಾಪಮಾನ ಮಿತಿಮೀರುತ್ತಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಮತ್ತು ಬೆಂಗಳೂರು ನಗರ, ಚಿತ್ರದುರ್ಗ, ಚಿಂತಾಮಣಿ, ಮೈಸೂರು ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಅಧಿಕವಾಗಿದೆ. ಇನ್ನು ಧಾರವಾಡ, ಕಲಬುರ್ಗಿ, ಆಗುಂಬೆಯಲ್ಲಿ ಕೇವಲ 24ಗಂಟೆಯಲ್ಲಿ ಭಾರಿ ಏರಿಕೆಯಾಗಿದೆ..
ರಾಜ್ಯದಲ್ಲಿ ಮಳೆಯ ಮುನ್ಸೂಚನೆ
ಇಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ತೇವಾಂಶದ ವಾತಾವರಣ ಇರುತ್ತದೆ. ಹಾಗಿದ್ದಾಗ್ಯೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಇನ್ನು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಬಿಸಿಗಾಳಿಯ ವಾತಾವರಣ ಇರಲಿದ್ದು, ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಧಾರವಾಡ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಬಿಸಿಲು ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗ, ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ- ಗುಡುಗು ಸಹಿತ ಹಗುರ ಮಳೆಯಾಗಬಹುದು.
