ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ಕಾವೇರಿ ವನ್ಯಜೀವಿ ಅಭಯಾರಣ್ಯದ ಅಡಿಯಲ್ಲಿ ಬರುವ ಮೀಸಲು ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ, ಬೇಟೆಯಾಡುವ ಬಗ್ಗೆ ಮಾಹಿತಿಯ ಮೇರೆಗೆ ಅರಣ್ಯ ಸಿಬ್ಬಂದಿ ನಾಲ್ವರು ವ್ಯಕ್ತಿಗಳ ಜೊತೆ ಚಕಮಕಿ ನಡೆಸಿದ್ದಾರೆ.
ನಿಖರವಾಗಿ ಏನಾಯಿತು ಮತ್ತು ಗುಂಡು ಹಾರಿಸುವುದು ಉದ್ದೇಶಪೂರ್ವಕವಾಗಿದೆಯೇ ಅಥವಾ ಆತ್ಮರಕ್ಷಣೆಗಾಗಿ ನಡೆಸಲಾಗಿದೆಯೇ ಎಂದು ಪತ್ತೆ ಹಚ್ಚಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ” ಎಂದು ರೆಡ್ಡಿ ತಿಳಿಸಿದರು.















