ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯು ದಿನಾಂಕ ಜ.25 ರಂದು ಪೂರ್ವಾಹ್ನ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಿತು.
ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಬಿಎಲ್ ಒ ಪ್ರಶಸ್ತಿಯನ್ನು ನೀಡಲಾಯಿತು. 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಎಲ್ ಒ ವಾಸುದೇವ ಶೆಟ್ಟಿಯವರು ಈ ಸಂದರ್ಭ ಪ್ರಶಸ್ತಿಯನ್ನು ಸ್ವೀಕರಿಸಿದರು.
