,

ಮಂಗಳೂರಿನ ವಿವಿಧ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಭೇಟಿ- ಸಾರ್ವಜನಿಕ ಸಮಸ್ಯೆಗಳ ಪರಿಶೀಲನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಸಾರ್ವಜನಿಕ ಸಮಸ್ಯೆಗಳನ್ನು ಪರಿಶೀಲಿಸಿದರು. ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಭೇಟಿ ನೀಡಿದ ಆಯುಕ್ತರು, ಅಲ್ಲಿನ ಹಾನಿಗೊಳಗಾದ ಕಾಲುಸೇತುವೆ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕೆ ಸಂಬಂಧಿಸಿದ ಸಾರ್ವಜನಿಕರ ದೂರುಗಳ ಪರಿಶೀಲನೆಗಾಗಿ ದೋಣಿಯಲ್ಲಿ ಸಂಚರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಹಾಗೂ ಪೈಪ್‍ಲೈನ್ ಅಳವಡಿಕೆಯ ಕುರಿತು ವಿವರಿಸಿದರು. ಅಲ್ಲದೆ, ಪ್ರದೇಶಕ್ಕೆ ಬಸ್…

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಸಾರ್ವಜನಿಕ ಸಮಸ್ಯೆಗಳನ್ನು ಪರಿಶೀಲಿಸಿದರು.

ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಭೇಟಿ ನೀಡಿದ ಆಯುಕ್ತರು, ಅಲ್ಲಿನ ಹಾನಿಗೊಳಗಾದ ಕಾಲುಸೇತುವೆ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕೆ ಸಂಬಂಧಿಸಿದ ಸಾರ್ವಜನಿಕರ ದೂರುಗಳ ಪರಿಶೀಲನೆಗಾಗಿ ದೋಣಿಯಲ್ಲಿ ಸಂಚರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಹಾಗೂ ಪೈಪ್‍ಲೈನ್ ಅಳವಡಿಕೆಯ ಕುರಿತು ವಿವರಿಸಿದರು. ಅಲ್ಲದೆ, ಪ್ರದೇಶಕ್ಕೆ ಬಸ್ ನಿಲ್ದಾಣ, ರಸ್ತೆ ಹಾಗೂ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.

ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಆಯುಕ್ತರು, ಸಮಸ್ಯೆಗಳ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮುಂಬರುವ ದಿನಗಳಲ್ಲಿ ದೀರ್ಘ ಬೇಸಿಗೆ ಹಾಗೂ ಜಿಲ್ಲೆಯಲ್ಲಿ ಬರಗಾಲದಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ, ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಬೇಕಾಗಿದೆ ಎಂದು ನಿವಾಸಿಗಳಿಗೆ ತಿಳಿಸಿದರು.

ಕುಡಿಯುವ ನೀರಿನ ಪೈಪ್‍ಲೈನ್ ಅಳವಡಿಕೆಗೆ ಸಂಬಂಧಿಸಿದಂತೆ ಕನಿಷ್ಠ 50 ನಿವಾಸಿಗಳ ಸಹಿ ಹಾಗೂ ಅನುಮೋದನೆಯೊಂದಿಗೆ ಮನವಿ ಪತ್ರವನ್ನು ಸಿದ್ಧಪಡಿಸಿ ನವೆಂಬರ್ 4 ರೊಳಗೆ ಪಾಲಿಕೆಗೆ ಸಲ್ಲಿಸುವಂತೆ ಸೂಚಿಸಿದರು. ಮುಂದಿನ ವಾರದೊಳಗೆ ಟೆಂಡರ್‍ಗೆ ಅನುಮೋದನೆ ದೊರೆಯಲಿದ್ದು, ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು. ಈ ಕುರಿತು ಅಧಿಕಾರಿಗಳು ತುರ್ತು ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಬಳಿಕ ಬಜಾಲ್‍ನಲ್ಲಿರುವ ಮಂಗಳೂರು ಮಹಾನಗರಪಾಲಿಕೆಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಫಿಶರ್ ಎಂಬ ಸ್ವಯಂಸೇವಾ ಸಂಸ್ಥೆ ನಿರ್ವಹಿಸುತ್ತಿರುವ ಮೆಟೀರಿಯಲ್ ರಿಕವರಿ ಪ್ಲಾಂಟ್‍ಗೆ ಭೇಟಿ ನೀಡಿ, ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ, ಅವರ ಕಾರ್ಯಚಟುವಟಿಕೆಗಳಿಗೆ ಪಾಲಿಕೆಯಿಂದ ಅಗತ್ಯ ಸಹಕಾರ ಮತ್ತು ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಜೆಪ್ಪಿನಮೊಗರು– ಕುಡ್ಪಾಡಿ ರಸ್ತೆಯ ರಾಜಕಾಲುವೆಗೆ ಭೇಟಿ ನೀಡಿದ ಅವರು, ಪ್ಲಾಸ್ಟಿಕ್ ಫಿಶರ್ ಸಂಸ್ಥೆ ಅಳವಡಿಸಿ ನಿರ್ವಹಿಸುತ್ತಿರುವ ತ್ಯಾಜ್ಯ ಸಂಗ್ರಹಣಾ ವ್ಯವಸ್ಥೆಪರಿಶೀಲಿಸಿದರು. ಆಂಕರಿಂಗ್ ವ್ಯವಸ್ಥೆಯ ಮೂಲಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವ ವಿಧಾನವನ್ನು ಸಂಸ್ಥೆಯ ಪ್ರತಿನಿಧಿಗಳು ವಿವರಿಸಿದರು. ಸಾಮಾನ್ಯ ದಿನಗಳಲ್ಲಿ 7 ರಿಂದ 10 ದಿನಗಳಿಗೊಮ್ಮೆ ಹಾಗೂ ಮಳೆಗಾಲದಲ್ಲಿ ನಾಲ್ಕು ದಿನಗಳಿಗೊಮ್ಮೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಉಪಆಯುಕ್ತ (ಅಭಿವೃದ್ಧಿ) ನರೇಶ್ ಪಿ. ಶೆಣೈ, ಪರಿಸರ ಎಂಜಿನಿಯರಿಂಗ್ ವಿಭಾಗದ ಹಾಗೂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed