, ,

ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ

ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೈಜಲ್ ಮಂಗಳೂರು ನಗರದ ಶಾಂತಿನಗರ ನಿವಾಸಿ ರಮ್ಮಿ ಯಾನೆ ರಮಿಜ್ ಬಂಧಿತ ಆರೋಪಿ.ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಉಳ್ಳಾಲ ಸೇರಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈ ಕೆಳಕಂಡ 5 ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ: 136/2017 u/s 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.…

ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೈಜಲ್ ಮಂಗಳೂರು ನಗರದ ಶಾಂತಿನಗರ ನಿವಾಸಿ ರಮ್ಮಿ ಯಾನೆ ರಮಿಜ್ ಬಂಧಿತ ಆರೋಪಿ.ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಉಳ್ಳಾಲ ಸೇರಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈ ಕೆಳಕಂಡ 5 ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ: 136/2017 u/s 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಆದರೆ ಆರೋಪಿಯು ಸುಮಾರು 2 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.ಕಂಕನಾಡಿ ನಗರ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಯವರಾದ ಹೆಡ್ ಕಾನ್ಸ್‌ಟೇಬಲ್ ಬಾಲರಾಜ್, ಪೊಲೀಸ್ ಕಾನ್ಸ್‌ಟೇಬಲ್ ರವಿಕುಮಾರ್, ಪೊಲೀಸ್ ಕಾನ್ಸ್‌ಟೇಬಲ್ ಯುವರಾಜ್ ರವರು ಜೂ. 8 ರಂದು ಈ ವಾರೆಂಟ್ ಆರೋಪಿಯನ್ನು ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed